ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿ : ತಹಶೀಲ್ದಾರ್ ಗೋವಿಂದರಾಜು ಸೂಚನೆ

30/06/2020

ಸೋಮವಾರಪೇಟೆ ಜೂ. 30 : ಕೋವಿಡ್-19 ವೈರಸ್ ಹರಡದಂತೆ ಮುನ್ನೇಚ್ಚರಿಕೆ ಕ್ರಮವಾಗಿ, ಬಳಗುಂದ ಮತ್ತು ಕರ್ಕಳ್ಳಿ ಗ್ರಾಮವನ್ನು ಸೀಲ್‍ಡೌನ್ ಮಾಡಿದ್ದು, ಜನರಿಗೆ ತೊಂದರೆಯಾಗದಂತೆ ಬೇಳೂರು ಹಾಗೂ ನೇರುಗಳಲೆ ಗ್ರಾಮ ಪಂಚಾಯಿತಿಯ ಪಿಡಿಒಗಳು ಎಚ್ಚರ ವಹಿಸಬೇಕು ಎಂದು ತಹಸೀಲ್ದಾರ್ ಗೋವಿಂದರಾಜು ಸೂಚಿಸಿದರು.
ಸೋಮವಾರ ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದ ತಹಸೀಲ್ದಾರರು, ಈಗಾಗಲೇ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಅನೇಕ ದೂರುಗಳು ಬಂದಿದ್ದು, ಇನ್ನು ಮುಂದೆ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸದ್ದಿದ್ದರೆ, ಅಮಾನತಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಸಿದರು. ಅಲ್ಲಿನ ಜನರ ಬೇಡಿಕೆಗಳನ್ನು ಪೂರೈಸಬೇಕು. ಎಲ್ಲಾ ಫೋನ್ ಕರೆಗಳನ್ನು ಸ್ವೀಕಾರ ಮಾಡಿ, ಸಲಹೆಗಳನ್ನು ನೀಡಬೇಕು ಎಂದು ಹೇಳಿದರು. ಸಭೆಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಇದ್ದರು.