ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಶುಕ್ರವಾರ ಜೆಡಿಎಸ್ ಪ್ರತಿಭಟನೆ

30/06/2020

ಮಡಿಕೇರಿ ಜೂ.30 : ಸೀಲ್‍ಡೌನ್ ನಿವಾಸಿಗಳಿಗೆ ಸರ್ಕಾರದ ವತಿಯಿಂದಲೇ ಉಚಿತ ದಿನಸಿ ಸಾಮಾಗ್ರಿಗಳನ್ನು ನೀಡಬೇಕೆಂದು ಒತ್ತಾಯಿಸಿ ಮತ್ತು ಶಾಸಕರುಗಳ ನಿರ್ಲಕ್ಷ್ಯವನ್ನು ಖಂಡಿಸಿ ಜು.3 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜೆಡಿಎಸ್ ವತಿಯಿಂದ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ.