ಬೆಳೆಗಾರ ಆತ್ಮಹತ್ಯೆಗೆ ಶರಣು : ಕಣ್ಣಂಗಾಲದಲ್ಲಿ ಘಟನೆ

June 30, 2020

ಮಡಿಕೇರಿ ಜೂ.30 : ಬೆಳೆಗಾರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯ ಕಣ್ಣಂಗಾಲ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ವಿ.ಜಿ.ರಮೇಶ್ (61) ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೀರಿಸಲಾಗದ ಸಾಲ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗಿದೆ.

error: Content is protected !!