ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಭೆ : ಕಾಂಗ್ರೆಸ್ ಗೆ ಹೆಚ್ಚಿನ ಬಲ : ವೀಣಾಅಚ್ಚಯ್ಯ ವಿಶ್ವಾಸ

30/06/2020

ಮಡಿಕೇರಿ ಜೂ.30 : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ಜು.2 ರಂದು ಪದಗ್ರಹಣ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷ ತನ್ನ ಶಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಭೆ ಇಂದು ನಗರದ ಗಣಪತಿ ಅರ್ಕಿಡ್ ಸಭಾಂಗಣದಲ್ಲಿ ನಡೆಯಿತು. ಡಿಕೆಶಿ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪದಾಧಿಕಾರಿಗಳಿಗೆ ಕರೆ ನೀಡಿದರು.
ಪಕ್ಷದ ಕೊಡಗು ಉಸ್ತುವಾರಿ ಮಂಜುಳ ರಾಜ್ ಅವರು ಮಾತನಾಡಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಅವರು ಮಾತನಾಡಿ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭದ ನೇರ ಪ್ರಸಾರ ಕೊಡಗು ಜಿಲ್ಲೆಯ ಎಲ್ಲಾ ವಲಯದಲ್ಲಿ ಎಕಕಾಲಕ್ಕೆ ನಡೆಯಲಿದೆ ಎಂದರು. ಕಾರ್ಯಕರ್ತರು ಪಕ್ಷ ಸಂಘಟನೆಗೆ ಕೈಜೋಡಿಸುವಂತೆ ಮನವಿ ಮಾಡಿದರು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ನಗರ ಅಧ್ಯಕ್ಷ ಜಿ.ಜಿ.ಮೋಹನ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಪೊನ್ನಕ್ಕಿ, ಸಾಮಾಜಿಕ ಜಾಲತಾಣದ ಮೈಸೂರು ಘಟಕದ ಮುಖ್ಯಸ್ಥ ಚಿಣ್ಣಪ್ಪ, ಬ್ಲಾಕ್ ಉಸ್ತುವಾರಿ ಪಿ.ರಾಜು, ವಲಯ ಅಧ್ಯಕ್ಷರು, ಪಟ್ಟಣ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.