ಆಗಸ್ಟ್ ಮೊದಲವಾರ ಎಸ್‍ಎಸ್‍ಎಲ್ ಸಿ ಫಲಿತಾಂಶ

01/07/2020

ಬೆಂಗಳೂರು ಜು. 1 : ಜುಲೈ 4ರಂದು ಮುಕ್ತಾಯಗೊಳ್ಳಲಿರುವ ಎಸ್‍ಎಸ್‍ಎಲ್ ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, ಪರೀಕ್ಷೆ ಮುಗಿದ ಸುರಕ್ಷಿತ ಮೌಲ್ಯ ಮಾಪನಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಸೋಮವಾರ ಎಸ್‍ಎಸ್‍ಎಲ್ ಸಿಪಿ ಮೂರನೇ ಪರೀಕ್ಷೆಯನ್ನು ಶೇ. 97.3ರಷ್ಟು ಮಕ್ಕಳು ಬರೆದಿದ್ದಾರೆ. ಕಳೆದ ವರ್ಷ 98.69 ರಷ್ಟು ಮಕ್ಕಳು ಪರೀಕ್ಷೆ ಬರೆದಿದ್ದರು. ನಿನ್ನೆ ಧಾರವಾಡದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಹಾಗೂ ರಾಯಚೂರಿನಲ್ಲಿ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದರು.
ಎಲ್ ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳಿರುವುದಿಲ್ಲ. ವಾರಕ್ಕೆ ಎರಡು ಬಾರಿ ಶಾಲೆಗಳ ಶಿಕ್ಷಕರು ಮಕ್ಕಳೊಂದಿಗೆ ದೂರವಾಣಿ ಮೂಲಕ ಸಂವಹನ ನಡೆಸುತ್ತಿರಬೇಕು ಎಂದು ಸೂಚಿಸಿದ್ದೇವೆ ಎಂದರು.