ಡಿಎಸ್‍ಎಸ್ ನಿಂದ ನಿರ್ಗಮಿತ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪೆನ್ನೇಕರ್ ಅವರಿಗೆ ಬೀಳ್ಕೊಡುಗೆ

01/07/2020

ಮಡಿಕೇರಿ ಜು. 1 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ನಿರ್ಗಮಿತ ಎಸ್. ಪಿ. ಡಾ. ಸುಮನ್ ಡಿ.ಪೆನ್ನೇಕರ್ ಅವರಿಗೆ ಬೀಳ್ಕೂಡುಗೆ ನೀಡಲಾಯಿತು.
ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಮಾತನಾಡಿ, ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಳ್ಳುತ್ತಿರುವ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪನ್ನೇಕರ್ ಅವರು ಅತ್ಯುತ್ತಮ ಸೇವೆ ಸಲ್ಲಿಸುವ ಮೂಲಕ ಜನರ ಮನದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಪ್ರಾಕೃತಿಕ ವಿಕೋಪದ ಸಂದರ್ಭ ಜನರ ಸಂಕಷ್ಟಕ್ಕೆ ಕೂಡಲೇ ಸ್ಪಂದಿಸುತ್ತಿದ್ದ ಅಧಿಕಾರಿ ಇಂದು ವರ್ಗಾವಣೆಗೊಂಡು ತೆರಳುತ್ತಿರುವುದು ನೋವಿನ ಸಂಗತಿ ಎಂದರು.
ಸನ್ಮಾನ ಸ್ವಿಕರಿಸಿ ಮಾತನಾಡಿದ ಎಸ್.ಪಿ. ಸುಮಾನ್ ಡಿ. ಪೆನ್ನೇಕರ್, ದಲಿತ ಸಂಘರ್ಷ ಸಮಿತಿ ಜನರ ಸಂಕಷ್ಟಗಳಿಗೆ ಜೊತೆಯಾಗಿ ನಿಂತು ಅವರನ್ನು ಚೇತರಿಸಿಕೊಳ್ಳುವಂತೆ ಮಾಡಿದ್ದಲ್ಲದೆ, ಕೊರೋನಾ ಪಿಡುಗಿನ ಸಮಯದಲ್ಲಿ ನಡೆಸಿದ ಸಾಮಾಜಿಕ ಕಾರ್ಯ ಪ್ರಶಂಸನೀಯ ಎಂದರು.
ಕಾರ್ಯಕ್ರಮದಲ್ಲಿ ಡಿ.ಎಸ್.ಎಸ್ ಕರ್ನಾಟಕ ಸಮಿತಿಯ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ತಾಲೂಕು ಸಂಚಾಲಕ ಎ.ಪಿ. ದೀಪಕ್ ಹಾಗೂ ನಗರ ಸಂಚಾಲಕ ಸಿದ್ದೇಶ್ವರ ಹಾಜರಿದ್ದರು.