ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ನಿಂದ ನಿರ್ಗಮಿತ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಸನ್ಮಾನ

01/07/2020

ಮಡಿಕೇರಿ ಜು. 1 : ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ವತಿಯಿಂದ ನಿರ್ಗಮಿತ ಪೋಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
ವರಿಷ್ಠಾಧಿಕಾರಿಗಳ ವಸತಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಎರಡು ವರ್ಷಗಳ ಅವಧಿಯಲ್ಲಿ ಪನ್ನೇಕರ್ ಅವರು ಕೊಡಗಿನಲ್ಲಿ ನಡೆಸಿದ ನಿಷ್ಠಾವಂತ ಹಾಗೂ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಆತ್ಮೀಯವಾಗಿ ಸನ್ಮಾನಿಸಿದರು.
ಕೊಡಗು ಜಿಲ್ಲಾ ಸ್ಕೌಟ್ಸ್ ಗೈಡ್ಸ್ ನ ಉಪಾಧ್ಯಕ್ಷ ಕೆ.ಟಿ ಬೇಬಿ ಮ್ಯಾಥ್ಯೂ ಮಾತನಾಡಿ, ಎರಡು ವರ್ಷಗಳ ಕಾಲ ಕೊಡಗಿನ ಪ್ರತಿಯೊಂದು ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಾ, ನೆರೆ ಸಂಕಷ್ಟದಲ್ಲಿ ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸುತ್ತಿದ್ದರು.
ಕೊಡಗು ಜಿಲ್ಲಾ ಸ್ಕೌಟ್ಸ್ ಗೈಡ್ಸ್ ನ ಪ್ರಧಾನ ಆಯುಕ್ತರು ಹಾಗೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಎಸ್ ಮಚ್ಚಾಡೋ ಅವರು ಮಾತನಾಡಿ, ವರಿಷ್ಠಾಧಿಕಾರಿಗಳು ವರ್ಗಾವಣೆಗೊಂಡು ತೆರಳುತ್ತಿರುವುದು ನೋವಿನ ಸಂಗತಿ. ಮುಂದಿನ ಅವರ ಭವಿಷ್ಯಕ್ಕೆ ಒಳಿತಾಗಲಿ ಎಂದರು.
ನಂತರ ಮಾತನಾಡಿದ ಪನ್ನೇಕರ್ ಅವರು ಭಾರತ್ ಸ್ಕೌಟ್ಸ್ ಗೈಡ್ಸ್ ಉತ್ತಮ ಸೇವಾ ಸಂಸ್ಥೆಯಾಗಿದ್ದು, ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿ ವಿಕೋಪದ ಸಂದರ್ಭದಲ್ಲಿ ಯಾವುದೇ ಆಕಾಂಕ್ಷೆಗಳಿಲ್ಲದೆ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದು ಪ್ರಶಂಸನೀಯ ಎಂದರು.
ಕಾರ್ಯಕ್ರಮದಲ್ಲಿ ವರಿಷ್ಠಾಧಿಕಾರಿಗಳಾದ ಡಾ. ಸುಮನ್ ಡಿ ಪನ್ನೇಕರ್ ಹಾಗು ಕುಟುಂಬ ವರ್ಗ, ಸ್ಕೌಟ್ಸ್ ನ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ ಹಾಜರಿದ್ದರು.