ಮೂರು ತಿಂಗಳ ಮಗು ಸೇರಿ ಮತ್ತೆ ಮೂವರಲ್ಲಿ ಕೊರೋನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 58ಕ್ಕೆ ಏರಿಕೆ

01/07/2020

ಮಡಿಕೇರಿ ಜು. 1 : ಕೊಡಗು ಜಿಲ್ಲೆಯಲ್ಲಿ ಇಂದು ಮಧ್ಯಾಹ್ನದ ನಂತರ ಮೂರು ತಿಂಗಳ ಮಗು ಸೇರಿ ಮತ್ತೆ ಮೂವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ವಿರಾಜಪೇಟೆ ತಾಲ್ಲೂಕು ಹುಂಡಿ ಗ್ರಾಮದ 3 ತಿಂಗಳ ಮಗುವಿಗೆ ಸೋಂಕು ದೃಢಪಟ್ಟಿದೆ.

ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ವಿರಾಜಪೇಟೆ ತಾಲ್ಲೂಕು ಹುಂಡಿ ಗ್ರಾಮದ 6 ವರ್ಷದ ಮಗುವಿಗೆ ಸೋಂಕು ದೃಢಪಟ್ಟಿದೆ.

ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ವಿರಾಜಪೇಟೆ ತಾಲ್ಲೂಕು ಹುಂಡಿ ಗ್ರಾಮದ 56 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಸೋಮವಾರಪೇಟೆ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ವಿರಾಜಪೇಟೆ ತಾಲ್ಲೂಕು ಹುಂಡಿ ಗ್ರಾಮದ 87 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಮೇಲಿನ ಮೊದಲ 4 ಪ್ರಕಣಗಳು ನಿಯಂತ್ರಿತ ಪ್ರದೇಶದಲ್ಲಿಯೇ ವರದಿಯಾಗಿರುವುದರಿಂದ ಹೊಸದಾಗಿ ನಿಯಂತ್ರಿತ ಪ್ರದೇಶಗಳನ್ನು ತೆರೆದಿರುವುದಿಲ್ಲ.

ಈ ಹಿಂದೆ ಸೋಂಕು ದೃಢಪಟ್ಟ 47 ವರ್ಷದ ವ್ಯಕ್ತಿಯು ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ ವಾಸ ಮಾಡಿದ್ದರಿಂದ ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ ಹೊಸದಾಗಿ ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ.

ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 58 ಕ್ಕೇರಿದ್ದು, 3 ಪ್ರಕರಣ ಗುಣಮುಖವಾಗಿರುತ್ತದೆ, 55 ಪ್ರಕರಣಗಳು ಸಕ್ರಿಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ ಒಟ್ಟು 24 ಆಗಿರುತ್ತದೆ.