2020-21ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

July 1, 2020

ಮಡಿಕೇರಿ ಜು.01 : ಕನ್ನಡ ಸಾಹಿತ್ಯ ಪರಿಷತ್ತು 2020-21ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. 2020ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 15 ರವರೆಗೆ ದಂಡ ಶುಲ್ಕ ರೂ. 50 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ.25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ [ಬೆಂಗಳೂರು] ದಿನಾಂಕ 01-07-2020 ರಿಂದ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25 ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ ಬೆಂಗಳೂರು-18, ದೂರವಾಣಿ ಸಂಖ್ಯೆ 080-26623584 ಇವರನ್ನು ಸಂಪರ್ಕಿಸಬಹುದು.

Exam, Performance, Education, Comparison, SAT Reasoning Tes

error: Content is protected !!