ಮಡಿಕೇರಿ ರಸ್ತೆ ಅವ್ಯವಸ್ಥೆ ವಿರುದ್ಧ ಮಹಿಳಾ ಕಾಂಗ್ರೆಸ್ ಅಸಮಾಧಾನ

01/07/2020

ಮಡಿಕೇರಿ ಜು.1 : ಮಡಿಕೇರಿ ನಗರದ ಎಲ್ಲಾ ರಸ್ತೆಗಳು ಸಂಪೂರ್ಣವಾಗಿ ಹೊಂಡ ಗುಂಡಿಗಳಾಗಿದ್ದು, ಮಳೆ ತೀವ್ರಗೊಂಡರೆ ಅಪಾಯದ ಪರಿಸ್ಥಿತಿ ಎದುರಾಗುವುದರಿಂದ ತಕ್ಷಣ ದುರಸ್ತಿ ಕಾರ್ಯಕ್ಕೆ ನಗರಸಭೆ ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಒತ್ತಾಯಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ನಗರದ ರಸ್ತೆಗಳೆಲ್ಲವೂ ಹದಗೆಟ್ಟಿದ್ದರೂ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ದುರಸ್ತಿ ಕಾರ್ಯಕ್ಕೆ ಕಾಳಜಿ ತೋರಿಲ್ಲವೆಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ಆರೋಪಿಸಿದ್ದಾರೆ. ಜಿಲ್ಲಾಡಳಿತದ ನಿರ್ಲಕ್ಷ್ಯದ ಪರಿಣಾಮ ಇಂದು ರಸ್ತೆಗಳ ಗುಂಡಿ ತುಂಬಾ ನೀರು ನಿಂತು ಪಾದಾಚಾರಿಗಳು ಹಾಗೂ ವಾಹನ ಚಾಲಕರ ಸಂಚಾರಕ್ಕೆ ಅಡಚಣೆಯಾಗಿದೆ. ಮಳೆ ಹೆಚ್ಚಾದರೆ ದ್ವಿಚಕ್ರ ವಾಹನಗಳು ಅಪಾಯಕ್ಕೆ ಸಿಲುಕುವ ಸಾಧ್ಯತೆಗಳಿದೆ.
ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ರಸ್ತೆಗಳು ಜಲಾವ್ರತಗೊಳ್ಳುವ ಆತಂಕ ಎದುರಾಗಿದೆ. ಮುಂದೆ ಅನಾಹುತಗಳು ಎದುರಾದರೆ ಅದಕ್ಕೆ ಜಿಲ್ಲಾಡಳಿತ ಮತ್ತು ನಗರಸಭೆಯೇ ನೇರಹೊಣೆ ಎಂದು ಫ್ಯಾನ್ಸಿ ಪಾರ್ವತಿ ತಿಳಿಸಿದ್ದಾರೆ. ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದರೂ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ತಮಗೇನು ಸಂಬಂಧವೇ ಇಲ್ಲ ಎನ್ನುವ ರೀತಿಯಲ್ಲಿ ನಿರ್ಲಕ್ಷ್ಯ ತೋರುತ್ತಿರುವುದನ್ನು ಖಂಡಿಸುವುದಾಗಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ತುರ್ತು ಚರಂಡಿ ವ್ಯವಸ್ಥೆ ಮತ್ತು ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.