ಕೊಡಗಿನ ಮೂರು ತಾಲ್ಲೂಕುಗಳಲ್ಲಿ ಕೋವಿಡ್ ಕೇಂದ್ರ : 24 ಗಂಟೆ ಸೇವೆ

01/07/2020

ಮಡಿಕೇರಿ ಜು.1 : ಕೋವಿಡ್-19 ರ ಸಂಬಂಧ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯ ಮೂರು ತಾಲ್ಲೂಕಿನಲ್ಲಿ ಸರ್ಕಾರಿ ಸಂಸ್ಥೆಗಳನ್ನು ಕೋವಿಡ್ ಪ್ರಕರಣಗಳ ಆರೈಕೆ ಕೇಂದ್ರಗಳಿಗಾಗಿ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಈ ಕೇಂದ್ರಗಳಲ್ಲಿ ಗುರುವಾರದಿಂದಲೇ ಸೋಂಕಿತ ಪ್ರಕರಣಗಳನ್ನು ದಾಖಲಿಸಿ ಆರೈಕೆ ನೀಡಲಾಗುವುದು. ವೈದ್ಯಕೀಯ ಸಿಬ್ಬಂದಿಗಳು ದಿನದ 24 ಗಂಟೆ ಹಾಜರಿದ್ದು, ಸೋಂಕಿತರ ಆರೈಕೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.