ಕೊರೋನಾಗೆ 7 ಮಂದಿ ಬಲಿ

July 2, 2020

ಬೆಂಗಳೂರು ಜು.2 : ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ 7 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 253ಕ್ಕೇರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಇಬ್ಬರು ಸೇರಿದಂತೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರಿನಲ್ಲಿ 735 ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ 1272 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 16514ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಬುಧವಾರ 145 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 8063ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 8194 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 292 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.