ಗಡಿಯಲ್ಲಿ ಪಾಕಿಸ್ತಾನ ಸೇನೆ ನಿಯೋಜನೆ
02/07/2020

ನವದೆಹಲಿ ಜು.2 : ವಾಸ್ತವಿಕ ಗಡಿ ರೇಖೆ(ಎಲ್‍ಎಸಿ)ಯಲ್ಲಿ ಹೆಚ್ಚುವರಿ ಸೇನೆಯನ್ನು ನಿಯೋಜಿಸಿ ಚೀನಾ ಉಪಟಳ ನೀಡುತ್ತಿದ್ದು, ಇದೀಗ ಪಾಕಿಸ್ತಾನ ಸಹ ಎಲ್‍ಒಸಿಯಲ್ಲಿ ಹೆಚ್ಚುವರಿ ಸೇನೆಯನ್ನು ನಿಯೋಜಿಸಿದೆ.
ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ನಲ್ಲಿ ಪಾಕಿಸ್ತಾನ ಹೆಚ್ಚುವರಿಯಾಗಿ 20 ಸಾವಿರ ಸೈನಿಕರನ್ನು ನಿಯೋಜನೆ ಮಾಡಿದೆ. ಇದೇ ವೇಳೆ ಪಾಕಿಸ್ತಾನದ ರೇಡಾರ್ ಗಳು ಸಂಪೂರ್ಣವಾಗಿ ಆಕ್ಟಿವ್ ಆಗಿ ಕಾರ್ಯ ನಿರ್ವಹಿಸುತ್ತಿದೆ.
ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಮತ್ತು ಭಾರತ ನಡುವೆ ಗುಂಡಿನ ದಾಳಿ, ಶೆಲ್ ದಾಳಿಗಳನ್ನು ನಿರಂತರವಾಗಿ ನಡೆಯುತ್ತಿರುತ್ತದೆ. ಇದೀಗ ಹೆಚ್ಚುವರಿಯಾಗಿ ಸೇನೆಯನ್ನು ನಿಯೋಜಿಸಿ ಭಾರತಕ್ಕೆ ಒದರಿಕೆಯೊಡ್ಡುತ್ತಿದೆ.
