ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿ ಹಾಗೂ ನೂತನ ಕಾರ್ಯಾಧ್ಯಕ್ಷರುಗಳ ಪದಗ್ರಹಣ : ಮಾಯಮುಡಿ ವಲಯ ಕಾಂಗ್ರೆಸ್ ನಿಂದ ಪದಸ್ವೀಕಾರ

02/07/2020

ಮಡಿಕೇರಿ ಜು. 2 : ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ನೂತನ ಅಧ್ಯಕ್ಷರ ಪದಸ್ವೀಕಾರ ಸಮಾರಂಭದ ನೇರಪ್ರಸಾರ ವೀಕ್ಷಣೆಯನ್ನು ಮಾಯಮುಡಿ ವಲಯ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿತ್ತು.

ವಿಧಾನ ಪರಿಷತ್ ಮಾಜಿ ಸದಸ್ಯರಾದ ಅರುಣ್ ಮಾಚಯ್ಯ ಅವರ ನಿವಾಸದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಯಮುಡಿ ವಲಯ ಕಾಂಗ್ರೆಸ್ ನ ನೂರಾರು ಪ್ರಮುಖರು ಮತ್ತು ಕಾರ್ಯಕರ್ತರು ಪಾಲ್ಗೊಂಡು ಕೆಪಿಸಿಸಿ ನೂತನ ಅಧ್ಯಕ್ಷರ ಪದಸ್ವೀಕಾರ ಸಮಾರಂಭವನ್ನು ಕಣ್ತುಂಬಿಕೊಂಡರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎನ್. ಪ್ರತ್ಯು, ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎಸ್. ಟಾಟು ಮೊಣ್ಣಪ್ಪ, ಮಾಯಮುಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಸಿ.ಕೆ. ಚಿಣ್ಣಪ್ಪ, ಹಿರಿಯ ಕಾಂಗ್ರೆಸ್ ಮುಖಂಡ ಎಸ್. ಎಂ. ವಿಶ್ವನಾಥ್, ಕಾಂಗ್ರೆಸ್ ಮುಖಂಡ ಮತ್ತು ರೈತ ನಾಯಕ ಪುಚ್ಚಿಮಾಡ ರಾಯಿ ಮಾದಪ್ಪ, ಮಾಯಮುಡಿ ವಿ.ಎಸ್.ಎಸ್.ಎನ್ ನಿರ್ದೇಶಕರಾದ ರಮೇಶ್ ಮಾಯಮುಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಬಿ. ಮಂಜುಳಾ, ಗ್ರಾಮ ಪಂಚಾಯತಿ ಸದಸ್ಯರಾದ ಎ.ಎಸ್. ನಾಚಯ್ಯ, ಶಬರೀಶ್ ಗೌರಿ ರಾಮು, ಶಾಂತ, ಮಣಿಕುಂಜ್ಹ, ರುಕ್ಮಣಿ ಸುಂದರ, ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕೊಣಿಯಂಡ ಮುತ್ತಣ್ಣ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.