ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ವಿತರಣೆ

02/07/2020

ಮಡಿಕೇರಿ ಜು. 2 : ಕೊರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ.ಗಳ ಪ್ರೋತ್ಸಾಹ ಧನದ ಚೆಕ್‍ನ್ನು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅವರು ವಿತರಿಸಿದರು.
ನಗರದ ಜಿ.ಪಂ.ಭವನದಲ್ಲಿ ನಡೆದ ಸಭೆಯಲ್ಲಿ 70 ಮಂದಿ ಆಶಾ ಕಾರ್ಯಕರ್ತೆಯರಿಗೆ ಚೆಕ್ ವಿತರಿಸಿದರು.
ನಂತರ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ 480 ಆಶಾ ಕಾರ್ಯಕರ್ತೆಯರು ಕೊರೊನಾ ಹೋಗಲಾಡಿಸುವಲ್ಲಿ ಶ್ರಮಿಸುತ್ತಿದ್ದು, ಪ್ರತಿಯೊಬ್ಬರೂ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು.