ಮಡಿಕೇರಿ ಬ್ಲಾಕ್ ಕಾಂಗ್ರೆಸ್‍ನಿಂದ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ವೀಕ್ಷಣೆ

02/07/2020

ಮಡಿಕೇರಿ ಜು. 2 : ಮಡಿಕೇರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಮಾಜಿ ನಗರಸಭಾ ಅಧ್ಯಕ್ಷ ಹೆಚ್.ಎಂ. ನಂದಕುಮಾರ್ ನೇತೃತ್ವದಲ್ಲಿ ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಪ್ರತಿಜ್ಞಾ ಕಾರ್ಯಕ್ರಮವನ್ನು ಝೂಮ್ ಆಪ್ ಮೂಲಕ ವೀಕ್ಷಣೆ ಮಾಡಲಾಯಿತು.
ಸೇವಾದಳದ ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪನವರು ಧ್ವಜಗೌರವ ಸಲ್ಲಿಸಿದರು. ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ ಕಾರ್ಯಕ್ರಮದ ಉದ್ದೇಶ ಮತ್ತು ಆಚರಣೆಯ ವಿವರ ನೀಡಿದರು.
ಝೂಮ್ ಆಪ್‍ನಲ್ಲಿ ಸಂವಿಧಾನದ ಪೀಠಿಕೆ ಮತ್ತು ಪ್ರತಿಜ್ಞಾ ವಿಧಿಗಳನ್ನು ಸಾಮೂಹಿಕವಾಗಿ ಸ್ವೀಕರಿಸಲಾಯಿತು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಹೆಚ್. ಎಂ. ನಂದಕುಮಾರ್ ಕಾಂಗ್ರೆಸ್ ಪಕ್ಷ ಬೆಳೆದು ಬಂದ ಇತಿಹಾಸವನ್ನು ಸ್ಮರಿಸಿದರು.
ಹಿರಿಯ ಮುಖಂಡ ಚಂದ್ರಮೌಳಿ ಮಾತನಾಡಿ, ಇದ್ದವರು ಇಲ್ಲದವರಿಗೆ ಸಹಕಾರ ಮಾಡುವುದು ಮನುಷ್ಯ ಧರ್ಮ ಅದನ್ನು ನಿರಂತರವಾಗಿ ನಂದಕುಮಾರ್ ಪಾಲಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದ ನಿಮಿತ್ತ ನಂದಕುಮಾರ್ ನೇತೃತ್ವದಲ್ಲಿ ಇನ್ನೂರು ಕುಟುಂಬಗಳಿಗೆ ಕಿಟ್ ವಿತರಿಸಲಾಯಿತು.
ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಕೆಪಿಸಿಸಿ ವೀಕ್ಷಕ ವೆಂಕಪ್ಪ ಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬೇಕಲ್ ರಮಾನಾಥ್, ಡಿಸಿಸಿ ಪ್ರಮುಖರಾದ ಎಮ್. ಇ. ಹನೀಫ್, ಟಿ. ಪಿ. ರಾಜೇಂದ್ರ, ನಗರ ಸಭೆ ಮಾಜಿ ಸದಸ್ಯರಾದ ಪ್ರಕಾಶ್ ಆಚಾರ್ಯ, ಕೆ. ಎಂ. ವೆಂಕಟೇಶ್, ಪ್ರಮುಖರಾದ ಪುಲಿಯಂಡ ಜಗದೀಶ್, ಪ್ರಭುರೈ, ರವಿಗೌಡ, ಡಿ.ಎಸ್.ಎಸ್ ಜಿಲ್ಲಾ ಸಂಚಾಲಕ ದಿವಾಕರ್, ತೋರೆರ ಮುದ್ದಯ್ಯ, ನಗರ ಕಾಂಗ್ರೆಸ್ ಪ್ರಮುಖರಾದ ಜಗದೀಶ್, ಯತೀಶ್ ಕುಮಾರ್, ವಸಂತ ಭಟ್ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.