ಡಿಕೆಶಿ ಪದಗ್ರಹಣ : ಕೊಡಗು ಕಾಂಗ್ರೆಸ್ಸಿಗರಿಂದ ಪ್ರತಿಜ್ಞಾ ವಿಧಿ ಸ್ವೀಕಾರ

ಮಡಿಕೇರಿ ಜು. 2 : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಹಾಗೂ ನೂತನ ಕಾರ್ಯಾಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ರಾಜ್ಯಾದ್ಯಂತ 7800 ಗ್ರಾಮ ಪಂಚಾಯ್ತಿಗಳಲ್ಲಿ ಝೂಮ್ ಆಪ್ ಮೂಲಕ ಏಕ ಕಾಲದಲ್ಲಿ ನಡೆಯಿತು.
ಕೊಡಗು ಜಿಲ್ಲೆಯ 104 ಗ್ರಾಮ ಪಂಚಾಯ್ತಿ ಸೇರಿದಂತೆ 116 ಕೇಂದ್ರಗಳಲ್ಲಿ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಗ್ರಾಮದ ಹಿರಿಯ ಕಾಂಗ್ರೆಸ್ಸಿಗರು ಹಾಗೂ ಪ್ರಮುಖರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಡಿಕೇರಿ ನಗರದ ಅಂಬೇಡ್ಕರ್ ಭವನ, ಕಮ್ಯೂನಿಟಿ ಹಾಲ್ ಸೇರಿದಂತೆ ಒಟ್ಟು 16 ಬ್ಲಾಕ್ಗಳಲ್ಲಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಕಾಂಗ್ರೆಸ್ : ಕೊಡಗು ಜಿಲ್ಲಾ ಕಾಂಗ್ರೆಸ್ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ವತಿಯಿಂದ ನಗರದ ಕೂರ್ಗ್ ಕಮ್ಯೂನಿಟಿ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕೆಪಿಸಿಸಿ ಉಸ್ತುವಾರಿ ಎಂ.ವೆಂಕಪ್ಪ ಗೌಡ, ಕೆಪಿಸಿಸಿ ಕೊಡಗು ಜಿಲ್ಲಾ ವೀಕ್ಷಕರಾದ ಮಂಜುಳಾರಾಜು, ಪ್ರಮುಖರಾದ ಕೆ.ಪಿ.ಚಂದ್ರಕಲಾ, ಹಿರಿಯ ಮುಖಂಡ ಚಂದ್ರಮೌಳಿ ಅವರು ದೀಪ ಬೆಳಗಿಸಿದರು.
ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಡಿಸಿಸಿ ಕಾರ್ಯದರ್ಶಿ ರಮಾನಾಥ್, ಸಾಮಾಜಿಕ ಜಾಲತಾಣದ ಮೈಸೂರು ವಿಭಾಗದ ಅಧ್ಯಕ್ಷ ಐ.ಜಿ.ಚಿಣ್ಣಪ್ಪ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ಜಿಲ್ಲಾ ವಕ್ತಾರ ಮುನೀರ್ ಅಹಮ್ಮದ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಉಪಾಧ್ಯಕ್ಷ ಜಫ್ರುಲ್ಲ, ಡಿಸಿಸಿ ಸದಸ್ಯ ಟಿ.ಎಂ. ಅಯ್ಯಪ್ಪ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ಅಧ್ಯಕ್ಷ ಆರ್.ಪಿ.ಚಂದ್ರಶೇಖರ್, ಡಿಸಿಸಿ ಸದಸ್ಯ ಟಿ.ಹೆಚ್. ಉದಯ, ರಾಹುಲ್ ಬ್ರಿಗೇಡ್ನ ಅಧ್ಯಕ್ಷ ಚುಮ್ಮಿದೇವಯ್ಯ, ಯುವ ಘಟಕದ ಅಧ್ಯಕ್ಷ ಮುದ್ದಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಮ್ಯಾಥ್ಯು, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ರಿಝ್ವನ್, ನಗರಸಭೆ ಮಾಜಿ ಅಧ್ಯಕ್ಷ ಕೆ.ಜಿ. ಹರೀಶ್, ಸೋನಿಯ ಗಾಂಧಿ ಬ್ರಿಗೇಡ್ನ ಜಿಲ್ಲಾಧ್ಯಕ್ಷೆ ಶಶಿ, ಬ್ಲಾಕ್ ಉಪಾಧ್ಯಕ್ಷೆ ಸ್ವರ್ಣಲತ, ನಗರಸಭೆ ಸದಸ್ಯೆ ತಜಸ್ಸುಂ, ಅಲ್ಪಸಂಖ್ಯ್ಯಾತರ ಘಟಕದ ರಾಜ್ಯ ಸಂಯೋಜಕ ಎಂ.ಎ.ಉಸ್ಮಾನ್, ಸೇವದಾಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಪ್ರಮುಖರಾದ ಅಜ್ಜಳ್ಳಿ ರವಿ, ರಿಯಾಸ್ ಮತ್ತಿತರರು ಹಾಜರಿದ್ದು, ನೇರ ಪ್ರಸಾರದಲ್ಲಿ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣವಾಗುತ್ತಿದ್ದಂತೆ ಪ್ರತಿಜ್ಞಾವಿಧಿ ಸ್ವೀಕರಿಸಿದರು.
