Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
9:24 PM Sunday 17-October 2021

ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನ

02/07/2020

ಮಡಿಕೇರಿ ಜು.02 : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿಯ ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ ವಿಶೇಷ ಕಿರು ಸಾಲ ಯೋಜನೆಯಡಿ ಕಿರು ಸಾಲ ಸೌಲಭ್ಯ ಯೋಜನೆ ಅಭಿಯಾನ ರೀತಿಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಯೋಜನೆಯ ಲಾಭ ಪಡೆದುಕೊಳ್ಳಲು ಬೀದಿ ವ್ಯಾಪಾರಸ್ಥರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು 2020ರ ಜುಲೈ, 01 ರಿಂದ ಆರಂಭಗೊಂಡು 2022 ರವರೆಗೆ ಯೋಜನೆಯ ಅಭಿಯಾನ ನಡೆಯಲಿದೆ. ಬೀದಿ ವ್ಯಾಪಾರಸ್ಥರಿಗೆ ಬ್ಯಾಂಕ್‍ಗಳ ಮೂಲಕ ಹತ್ತು ಸಾವಿರ ರೂ.ಗಳವರೆಗೆ ಸಾಲ ಸೌಲಭ್ಯ ನೀಡುವುದು, ನಿಯಮಿತವಾಗಿ ಸಾಲ ಮರುಪಾವತಿ ಮಾಡಿದವರಿಗೆ ಶೇ.7ರಷ್ಟು ಬಡ್ಡಿ ಸಹಾಯಧನ ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಡಿಜಿಟಲ್ ವಹಿವಾಟಿಗೆ ಉತ್ತೇಜನ ಹಾಗೂ ಬಹುಮಾನ ನೀಡುವ ಉದ್ದೇಶಗಳನ್ನು ಹೊಂದಿದೆ. ಈಗಾಗಲೇ ಬೀದಿ ವ್ಯಾಪಾರಿಗಳ ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಸ್ಥರು ಅರ್ಹ ಫಲಾನುಭವಿಗಳಾಗಿರುತ್ತಾರೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಬೀದಿ ವ್ಯಾಪಾರಸ್ಥರು ಬೀದಿ ಬದಿ ವ್ಯಾಪಾರಿಗಳ ಗುರುತಿನ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್(ಬಿಪಿಎಲ್ ಕಾರ್ಡ್), ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಇತರೆ ದಾಖಲೆಗಳು, ವ್ಯಾಪಾರ ಮಾಡುತ್ತಿರುವ ಸ್ಥಳದಲ್ಲಿನ ಭಾವಚಿತ್ರಗಳನ್ನು ನಿಗಧಿತ ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸುವುದು.
ಆಸಕ್ತರು ಜುಲೈ, 15 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅವರನ್ನು ಸಂಪರ್ಕಿಸಬಹುದು.