ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಕ್ಕೆ ಜಿ.ಪಂ. ಸಿಇಒ ಭೇಟಿ : ಪರಿಶೀಲನೆ

02/07/2020

ಮಡಿಕೇರಿ ಜು.02 : ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಎಸ್‍ಎಸ್‍ಎಲ್‍ಸಿ ಕನ್ನಡ ಭಾಷಾ ಪರೀಕ್ಷೆ ಸಂದರ್ಭ ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದರು. ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ, ಸಂತ ಮೈಕಲರ ಶಾಲೆಯ ಮುಖ್ಯ ಶಿಕ್ಷಕರಾದ ಜಾನ್ಸನ್ ಇತರರು ಇದ್ದರು.