ಮಹಿಳಾ ಕಾಂಗ್ರೆಸ್ ನಿಂದ ಪ್ರತಿಜ್ಞಾ ವಿಧಿ : ಕೊಡಗು ಮತ್ತೆ ಕಾಂಗ್ರೆಸ್ ಭದ್ರಕೋಟೆಯಾಗಲಿದೆ : ವೀಣಾಅಚ್ಚಯ್ಯ ವಿಶ್ವಾಸ

July 2, 2020

ಮಡಿಕೇರಿ ಜು.2 : ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕೊಡಗು ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇತಿಹಾಸ ಮರುಕಳಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ವತಿಯಿಂದ ನಗರದಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್ ಅವರ ನಿವಾಸದ ಸಭಾಂಗಣದಲ್ಲಿ ನಡೆದ ಕೆಪಿಸಿಸಿಯ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣದ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಎಲ್ಲರೂ ಒಗ್ಗಟ್ಟಿನಿಂದ ಪಕ್ಷವನ್ನು ಸಂಘಟಿಸುವ ಮೂಲಕ ಅಧಿಕಾರಕ್ಕೆ ಬರುವ ಗುರಿ ಹೊಂದಬೇಕೆಂದು ಕರೆ ನೀಡಿದರು.
ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್ ಕಾರ್ಯಕ್ರಮ ನಿರ್ವಹಿಸಿದರು.
ಡಿಕೆಶಿ ಮತ್ತು ನೂತನ ಕಾರ್ಯಾಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮವನ್ನು ಝೂಮ್ ಆಪ್ ಮೂಲಕ ವೀಕ್ಷಿಸಿದ ಮಹಿಳಾ ಮುಖಂಡರು ಹಾಗೂ ಪದಾಧಿಕಾರಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.