ಕೊಡಗು ಮಹಿಳಾ ಕಾಂಗ್ರೆಸ್ ನೇತೃತ್ವ : ಹಲವರು ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆ

02/07/2020

ಮಡಿಕೇರಿ ಜೂ.2 : ಮಹಿಳಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್ ಹಾಗೂ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷದ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಬಿಜೆಪಿ ಪಕ್ಷದಲ್ಲಿದ್ದ ಜಿಯೋ ಕ್ಲಿಂಟನ್, ಸುಮಂತ್, ಸೋನು, ಯತೀಶ್, ಪ್ರಜ್ವಲ್, ದರ್ಶನ್, ಅನ್ವಿತ್, ಕೋಚನ ಚೇತು ಹಾಗೂ ತಾಜುದ್ದೀನ್ ಅವರುಗಳು ಕಾಂಗ್ರೆಸ್ ಪಕ್ಷವನ್ನು ಸೇರಿದರು.
ವಿಧಾನ ಪರಿಷತ್ ಸದಸ್ಯೆ ವೀಣಾಅಚ್ಚಯ್ಯ, ಜಿ.ಪಂ ಸದಸ್ಯರುಗಳಾದ ಕೆ.ಪಿ.ಚಂದ್ರಕಲಾ, ಸದಸ್ಯ ಪಿ.ಎಂ.ಲತೀಫ್, ಹಿರಿಯ ಮುಖಂಡ ಹೆಚ್.ಎಸ್.ಚಂದ್ರಮೌಳಿ, ಕೆಪಿಸಿಸಿ ಕಾರ್ಯದರ್ಶಿ ಮಂಜುಳಾ ರಾಜ್, ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಧ್ವಜವನ್ನು ನೀಡಿ ಪಕ್ಷಕ್ಕೆ ಬರ ಮಾಡಿಕೊಳ್ಳಲಾಯಿತು.
ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ಜಿಯೋನ್ ಕ್ಲಿಂಟನ್ ಮಾತನಾಡಿ, ಇಂದಿನ ಯುವಕರು ಬಿಜೆಪಿ ಪಕ್ಷಕ್ಕೆ ಆಕರ್ಷಿತರಾಗುತ್ತಿದ್ದಾರೆ, ಆದರೆ ಕಾಂಗ್ರೆಸ್ ಪಕ್ಷದಲ್ಲೂ ಡಿ.ಕೆ.ಶಿವಕುಮಾರ್ ಅವರಂತಹ ಬಲಿಷ್ಠ ನಾಯಕರು ಇದ್ದಾರೆ ಎನ್ನುವುದನ್ನು ಅರಿತುಕೊಳ್ಳಬೇಕು ಎಂದರು. ಯುವ ಸಮೂಹದ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದ ಬಲ ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಡಿಕೇರಿ ನಗರಾಧ್ಯಕ್ಷ ಅಬ್ದುಲ್ ರಜಾಕ್, ನಗರ ಉಪಾಧ್ಯಕ್ಷ ಜಫ್ರುಲ್ಲ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಕಿಸಾನ್ ಘಟಕದ ಅಧ್ಯಕ್ಷ ಉಮೇಶ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮನಾಥ್, ಮಹಿಳಾ ಕಾಂಗ್ರೆಸ್ ಗೋಣಿಕೊಪ್ಪ ಬ್ಲಾಕ್ ಅಧ್ಯಕ್ಷೆ ಯಮುನಾ, ಖಾದಿ ಬೋರ್ಡ್ ಮಾಜಿ ನಿರ್ದೇಶಕರಾದ ರೂಪ ಭೀಮಯ್ಯ, ಮಡಿಕೇರಿ ನಗರ ಮಹಿಳಾ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ನಗರಸಭೆ ಮಾಜಿ ಅಧ್ಯಕ್ಷೆ ಜುಲೇಕಾಬಿ, ಕೆಪಿಸಿಸಿ ಮಾಜಿ ಸದಸ್ಯರಾದ ಫಿಲೋಮಿನ, ತಾಯಿರ ಅಫೀಜ್, ಸೇವಾದಳ ಅಧ್ಯಕ್ಷೆ ಪ್ರೇಮ ಮತ್ತಿತರ ಪ್ರಮುಖರು ಈ ಸಂದರ್ಭ ಹಾಜರಿದ್ದರು.