Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
2:58 AM Friday 22-October 2021

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆ

03/07/2020

ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 4 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 76 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಈ ಹಿಂದೆ ಸೋಂಕು ದೃಢಪಟ್ಟ ಮಡಿಕೇರಿಯ ಆಸ್ಪತ್ರೆಯ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ಮೂರ್ನಾಡುವಿನ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 49 ವರ್ಷದ ಪುರುಷ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಮಡಿಕೇರಿಯ ಮಹದೇವಪೇಟೆಯ ಚೌಡೇಶ್ವರಿ ದೇವಸ್ಥಾನದ ಹಿಂಭಾಗದಲ್ಲಿ ವಾಸವಿರುವ 27 ವರ್ಷದ ಪುರುಷ ಆರೋಗ್ಯಕರ್ತರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಮಡಿಕೇರಿಯ ಭಗವತಿ ನಗರದ 24 ವರ್ಷದ ಪುರುಷ ಆರೋಗ್ಯಕರ್ತರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ವಿರಾಜಪೇಟೆ ಶಾಂತಿನಗರದ 40 ವರ್ಷದ ಪುರುಷರೊಬ್ಬರು ಜ್ವರ ಲಕ್ಷಣದಿಂದ ಬಳಲುತ್ತಿದ್ದು, ಅವರಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಹೊಸದಾಗಿ 1. ಮಡಿಕೇರಿಯ ಆಸ್ಪತ್ರೆ ವಸತಿಗೃಹ 2. ಭಗವತಿ ನಗರ 3. ಮಹದೇವಪೇಟೆ ಮತ್ತು 4. ವಿರಾಜಪೇಟೆಯ ಶಾಂತಿನಗರದಲ್ಲಿ ನಿಯಂತ್ರಿತ ಪ್ರದೇಶಗಳನ್ನು ತೆರೆಯಲಾಗಿದೆ.

ಆದುದರಿಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ:76 ಕ್ಕೇರಿದ್ದು, 3 ಪ್ರಕರಣ ಗುಣಮುಖವಾಗಿರುತ್ತದೆ. 73 ಪ್ರಕರಣಗಳು ಸಕ್ರಿಯವಾಗಿರುತ್ತದೆ. ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ ಒಟ್ಟು-30 ಆಗಿರುತ್ತದೆ.