ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಸೋಂಕು
03/07/2020

ಮಂಗಳೂರು ಜು.3 : ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.
ಸೋಂಕಿತರ ಸಂಪರ್ಕದಿಂದ ಶಾಸಕರಿಗೆ ಕೊರೋನಾ ಬಂದಿದೆ ಈ ಸಂಬಂಧ ಸ್ಪಷ್ಟನೆ ನೀಡಿರುವ ಭರತ್ ಶೆಟ್ಟಿ ತಮಗೆ ಕೊರೋನಾ ಪಾಸಿಟಿವ್ ದೃಢವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕೆಲವು ದಿನಗಳಿಂದ ಚಿಕಿತ್ಸೆಯಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ. “ನನಗೆ ಕೋವಿಡ್ -19 ದೃಢಪಟ್ಟಿತ್ತು. ನಿಮ್ಮೆಲ್ಲರ ಹಾರೈಕೆಯಿಂದ ನಾನು ಚೇತರಿಸಿಕೊಳ್ಳುತ್ತಿದ್ದೇನೆ ಮತ್ತು ಕೆಲ ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.
“ಪ್ರತಿಯೊಬ್ಬರೂ ಹೊರ ಹೋದಾಗ ಮಾಸ್ಕ್ ಧರಿಸಿರಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಿರಿ ಮತ್ತು ಪದೇ ಪದೆ ಕೈ ತೊಳೆದುಕೊಳ್ಳಿ. ನಿಮ್ಮ ಮತ್ತು ನಿಮ್ಮ ಆಪ್ತರ ಆರೋಗ್ಯ ಕಾಪಾಡಿಕೊಳ್ಳಿ” ಎಂದು ಮನವಿ ಮಾಡಿದ್ದಾರೆ.
