ದಕ್ಷಿಣ ಕನ್ನಡ, ಹಾಸನದಲ್ಲಿ 1 ಬಲಿ

03/07/2020

ಬೆಂಗಳೂರು ಜು.3 : ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಗಣಿ ನಾಡು ಬಳ್ಳಾರಿಯಲ್ಲಿ ಇಬ್ಬರು ಹಾಗೂ ಗದಗ, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ತಲಾ ಒಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ.
ಕೋವಿಡ್19 ಸೋಂಕಿಗೆ ಒಳಗಾದ ಬಳ್ಳಾರಿ ಜಿಲ್ಲೆಯ ಇಬ್ಬರೂ ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 31ಕ್ಕೆ ಏರಿಕೆಆಗಿದೆ.
ನಗರದ ದೇವಿನಗರದ ವೃದ್ಧೆ (75) ಹೃದಯಾಘಾತ, ಮೂತ್ರಪಿಂಡಸಮಸ್ಯೆಯಿಂದ ಬಳಲುತ್ತಿದ್ದು, ಬುಧವಾರ ಮೃತಪಟ್ಟಿದ್ದಾರೆ. ಅಲ್ಲದೇ, ಸಂಡೂರು ತಾಲ್ಲೂಕಿನ ಯಶವಂತನಗರದ ಪುರುಷ (43) ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.