ವಿಕಾಸ್ ಜನ ಸೇವಾ ಟ್ರಸ್ಟ್‍ನಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್ ವಿತರಣೆ

03/07/2020

ಮಡಿಕೇರಿ ಜು. 3 : ವಿಕಾಸ್ ಜನ ಸೇವಾ ಟ್ರಸ್ಟ್ ಜೀವನದಾರಿ ಆಶ್ರಮದ ವತಿಯಿಂದ ಸುಂಟಿಕೊಪ್ಪ ಸಂತ ಮೇರಿಸ್ ಹಾಗೂ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್ ವಿತರಿಸಲಾಯಿತು.
ಈ ಸಂದರ್ಭ ಮಾತನಾಡಿದ ಟ್ರಸ್ಟ್‍ನ ಅಧ್ಯಕ್ಷ ರಮೇಶ್, ಕೊರೋನಾ ಸಂದರ್ಭದಲ್ಲೂ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಮತ್ತಷ್ಟು ಪ್ರೋತ್ಸಾಹಿಸುವಂತಾಗಬೇಕು ಎಂದರು. ವಿದ್ಯಾರ್ಥಿಗಳು ಕೊರೋನಾ ವೈರಸ್ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಅಗತ್ಯ ವಸ್ತುಗಳಾದ ಸ್ಯಾನಿಟೈಸರ್, ಮಾಸ್ಕ್‍ಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿದರು.
ಕಾರ್ಯಕ್ರಮದಲ್ಲಿ ಟ್ರಸ್ಟ್‍ನ ಪದಾಧಿಕಾರಿಗಳು ಹಾಗೂ ಶಿಕ್ಷಕರು ಹಾಜರಿದ್ದರು.