ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷರಾಗಿ ಐರೀರ ಎ.ಜಿ.ವಿಜಯ ಆಯ್ಕೆ

03/07/2020

ಮಡಿಕೇರಿ ಜು. 3 : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷರಾಗಿ ಹಿತ್ಲುಗದ್ದೆ ಗ್ರಾಮದ ಐರೀರ ಎ.ಜಿ.ವಿಜಯ ಅವರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಅವರ ಆದೇಶದ ಮೇರೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು. ಜಿಲ್ಲೆಯಲ್ಲಿ ಜಾತ್ಯಾತೀತ ಜನತಾದಳದ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಕೆ.ಎಂ. ಗಣೇಶ್ ತಿಳಿಸಿದ್ದಾರೆ.