ಕೊಡಗು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

03/07/2020

ಮಡಿಕೇರಿ ಜು. 3 : ಸರ್ಕಾರದ ಮಾರ್ಗಸೂಚಿಯಂತೆ ಕೊಡಗು ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಒಟ್ಟು 27 ಪರೀಕ್ಷಾ ಕೇಂದ್ರಗಳಲ್ಲಿ 7,164 ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುತ್ತಾರೆ. ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ತೆರೆಯಲಾದ ನಿಯಂತ್ರಿತ ಪ್ರದೇಶಗಳಿಂದ (Containment Zone) 74 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಸಂದರ್ಭದಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು.