ವಿ.ಪಿ.ಶಶಿಧರ್ ವಿರುದ್ಧ ಶ್ರೀಮಂಗಲದಲ್ಲಿ ಬಿಜೆಪಿ ಪ್ರತಿಭಟನೆ

03/07/2020

ಮಡಿಕೇರಿ ಜು.3 : ಕಾಂಗ್ರೆಸ್ ಪ್ರಮುಖ ವಿ.ಪಿ.ಶಶಿಧರ್ ಅವರು ಪ್ರಧಾನಿ ನರೇಂದ್ರಮೋದಿ ಅವರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಶ್ರೀಮಂಗಲದಲ್ಲಿ ಬಿಜೆಪಿ ಪ್ರಮುಖರು ಪ್ರತಿಭಟನೆ ನಡೆಸಿದರು.
ಟಿ.ಶೆಟ್ಟಿಗೇರಿ, ಶ್ರೀಮಂಗಲ, ಕುಟ್ಟ, ನಾಲ್ಕೇರಿ ವ್ಯಾಪ್ತಿಯ ಪದಾಧಿಕಾರಿಗಳು ಶಶಿಧರ್ ಕ್ರಮವನ್ನು ಖಂಡಿಸಿದರು. ಅಲ್ಲದೆ ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿ ಪೊಲೀಸರಿಗೆ ದೂರು ನೀಡಿದರು. ಇದೇ ಸಂದರ್ಭ ಪ್ರತಿಭಟನಾಕಾರರು ಚೀನಾ ಮೂಲದ ವಸ್ತುಗಳ ಮಾರಾಟವನ್ನು ನಿರ್ಬಂಧಿಸಬೇಕೆಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅರುಣ್ ಭೀಮಯ್ಯ, ತಾಲ್ಲೂಕು ಉಪಾಧ್ಯಕ್ಷ ಸುಮಂತ್, ಕೃಷಿ ಮೋರ್ಚಾ ತಾಲೂಕು ಅಧ್ಯಕ್ಷ ಕಟ್ಟೇರ ಈಶ್ವರ ತಿಮ್ಮಯ್ಯ, ತಾಲೂಕು ಪಂಚಾಯತಿ ಸದಸ್ಯ ಸರೋಜ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಉಪಾಧ್ಯಕ್ಷ ಸುಶೀಲ ಅಶೋಕ್, ಜಿ.ಪಂ ಮಾಜಿ ಅಧ್ಯಕ್ಷೆ ಶರೀನ್ ಸುಬ್ಬಯ್ಯ ಮತ್ತಿತರರು ಹಾಜರಿದ್ದರು.