ಜು. 10 ರಂದು ಸಚಿವ ಸೋಮಣ್ಣ ಭೇಟಿ

04/07/2020

ಮಡಿಕೇರಿ ಜು.8 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜು.10 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲೂಕಿನ ಪಶು ವೈದ್ಯಕೀಯ ಆಸ್ಪತ್ರೆ ಹಾಗೂ ಅಂಕನಹಳ್ಳಿಯ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರ ಇವುಗಳ ನೂತನ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬಳಿಕ ಮಧ್ಯಾಹ್ನ 12 ಗಂಟೆಗೆ ಕೊರೊನಾ (ಕೋವಿಡ್-19) ನಿರ್ವಹಣೆ ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳೂ ಸೇರಿದಂತೆ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಗರದ ಜಿ.ಪಂ ಸಭಾಂಗಣದಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.