ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕುಶಾಲನಗರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

July 4, 2020

ಕುಶಾಲನಗರ ಜು. 4 : ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿತು.
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆಗೆ ಬೆಂಬಲವಾಗಿ ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರು ನಾಡಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಕೋವಿಡ್ ನಿಯಂತ್ರಿಸಲು ಸರಕಾರಗಳು ವಿಫಲವಾಗಿದೆ ಎಂದು ಆರೋಪಿಸಿದರು. ಕಾರ್ಮಿಕ ಸಂಘಟನೆಗಳ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಪ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.