ರಾಜ್ಯದಲ್ಲಿ ಸಾಂಸ್ಥಿಕ ಕ್ವಾರಂಟೈನ್ ರದ್ದು

July 7, 2020

ಬೆಂಗಳೂರು ಜು.7 : ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಸಡಿಲಿಸಿದ್ದು, ಹೊರ ರಾಜ್ಯ ಅಥವಾ ವಿದೇಶದಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ 14 ದಿನ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಿ, ಸಾಂಸ್ಥಿಕ ಕ್ವಾರಂಟೈನ್ ರದ್ದುಗೊಳಿಸಿದೆ.
ಈ ಮುಂಚೆ ಹೊರ ರಾಜ್ಯ ಹಾಗೂ ವಿದೇಶದಿಂದ ಬರುವವರಿಗೆ ಒಂದು ಸರ್ಕಾರಿ ಅಥವಾ ಸಾಂಸ್ಥಿಕ ಕ್ವಾರಂಟೈನ್‍ಕಡ್ಡಾಯವಾಗಿತ್ತು. ಇದೀಗ ಅದನ್ನು ರದ್ದುಗೊಳಿಸಿದ್ದು, ಮನೆಯಲ್ಲೇ 14 ದಿನ ಕ್ವಾರಂಟೈನ್‍ಗೆ ಒಳಗಾದರೆ ಸಾಕು ಎಂದು ರಾಜ್ಯ ಸರ್ಕಾರ ಇಂದು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಈ ಹಿಂದೆ ರಾಜ್ಯ ಸರ್ಕಾರ ಹೊರ ರಾಜ್ಯ ಅಥವಾ ವಿದೇಶದಿಂದ ಆಗಮಿಸುವವರು ಖಡ್ಡಾಯವಾಗಿ 07 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 07 ದಿನ ಹೋಮ್‍ಕ್ವಾರಂಟೈನ್‍ಗೆ ಒಳಗಾಗಬೇಕು ಎಂದು ನಿಯಮ ರೂಪಿಸಿತ್ತು. ಅಲ್ಲದೆ, ಕ್ವಾರಂಟೈನ್‍ಗೆ ಒಳಗಾಗುವವರೇ ಅದರ ಹಣವನ್ನು ಪಾವತಿ ಮಾಡಬೇಕು ಎಂದು ಸೂಚಿಸಲಾಗಿತ್ತು. ಈ ನಿಯಮದಿಂದಾಗಿ ಅನೇಕರಿಗೆ ಆರ್ಥಿಕವಾಗಿ ಸಾಕಷ್ಟು ತೊಂದರೆಯೂ ಉಂಟಾಗಿತ್ತು.
ರೈಲು, ವಿಮಾನದ ಮೂಲಕ ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವವರು ಹೊಸ ಕ್ವಾರಂಟೈನ್ ನಿಯಮಗಳನ್ನು ತಿಳಿದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ.

error: Content is protected !!