ಅಬ್ಬಿಯಾಲದಿಂದ ಚೆಟ್ಟಳ್ಳಿ ವರೆಗೆ ವಾಹನ ಸಂಚಾರ ನಿರ್ಬಂಧ

07/07/2020

ಮಡಿಕೇರಿ ಜು. 7 : ಮಳೆಹಾನಿ ಕಾಮಗಾರಿಯನ್ನು ಶೀಘ್ರವಾಗಿ ಕೈಗೊಂಡು ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ 1963ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ(5), ದಂಡಪ್ರಕ್ರಿಯಾ ಸಂಹಿತೆ 1973ರ ಕಲಂ144ರಡಿ ಸಾರ್ವಜನಿಕ ಆಸ್ತಿ-ಪಾಸ್ತಿಗಳ ಸುರಕ್ಷತೆಯ ಹಿತದೃಷ್ಠಿಯಿಂದ ಅಬ್ಬಿಯಾಲದಿಂದ ಚೆಟ್ಟಳ್ಳಿ ವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 9 ರಿಂದ ಆಗಸ್ಟ್ 25 ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಬದಲಿ ರಸ್ತೆಯಾದ ಚೆಟ್ಟಳ್ಳಿ-ಸುಂಟಿಕೊಪ್ಪ-ಮಡಿಕೇರಿ ಮಾರ್ಗದ ಬದಲಿ ರಸ್ತೆಯಲ್ಲಿ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.