ಗುಂಡಿನ ಚಕಮಕಿ : ಯೋಧ ಹುತಾತ್ಮ

08/07/2020

ಶ್ರೀನಗರ ಜು.7 : ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿ ವೇಳೆ ಓರ್ವ ಭಯೋತ್ಪಾದಕನನ್ನು ಸೇನೆ ಸೆದೆಬಡಿದಿದ್ದು, ಇದೇ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಪುಲ್ವಾಮಾದ ಗೂಸು ಗ್ರಾಮದಲ್ಲಿ ಇಂದು ಬೆಳಗ್ಗೆ ಕಾರ್ಯಾಚರಣೆ ನಡೆದಿದೆ. ಪೊಲೀಸರು ಹಾಗೂ ಭದ್ರತಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಗುಂಡಿನ ಚಕಮಕಿ ವೇಳೆ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಇನ್ನೂ ಹೆಚ್ಚಿನ ಮಾಹಿತಿ ಲಭಿಸಬೇಕಿದೆ ಎಂದು ಕಾಶ್ಮೀರ ವಲಯದ ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.