ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ : ಅಪಾಯದಲ್ಲಿರುವ ಮನೆಗಳಿಗೆ ಎಚ್ಚರಿಕೆ

08/07/2020

ಮಡಿಕೇರಿ ಜು. 8 : ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ಭಾಗಮಂಡಲ-ತಲಕಾವೇರಿ ಮಾರ್ಗದ ಚೇರಂಗಾಲ ಬಳಿ ಭೂಕುಸಿತ ಉಂಟಾಗಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಭೇಟಿ ನೀಡಿ ಪರಿಶೀಲಿಸಿದರು.
ಭಾಗಮಂಡಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ನಿಭಾಯಿಸಲು ಮುಂಜಾಗ್ರತಾ ಕ್ರಮವಾಗಿ ಭಾಗಮಂಡಲದಲ್ಲಿ ಹೋಂ ಗಾಡ್ರ್ಸ್‍ಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಭೂಕುಸಿತ ಉಂಟಾದ ಪ್ರದೇಶದ ಬಳಿ ವಾಸಿಸುವವರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಈಗಾಗಲೇ ಪರಿಹಾರ ಕಾರ್ಯಾಚರಣೆ ತಂಡ, ಲೋಕೋಪಯೋಗಿ ಇಲಾಖೆ ಮತ್ತು ಸ್ಥಳೀಯ ಪಂಚಾಯತ್ ಅಧಿಕಾರಿಗಳ ನೇತೃತ್ವದಲ್ಲಿ ಮಣ್ಣು ತೆರವುಗೊಳಿಸಿದ್ದು, ಸಾರಿಗೆ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.