ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 79

08/07/2020

ಮಡಿಕೇರಿ ಜು.8 : ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 
      ಇತರೆ ದೇಶ/ರಾಜ್ಯಗಳಿಂದ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ. 
ಇತರೆ ದೇಶ/ರಾಜ್ಯ/ಜಿಲ್ಲೆಗಳಿಂದ ಕಳೆದ 14 ದಿನಗಳಲ್ಲಿ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರ ಪೈಕಿ ಸಂಪರ್ಕ ತಡೆಯಲ್ಲಿರುವ ಜನರ ವಿವರ ಕೆಳಕಂಡಂತಿದೆ.
1. ಇತರೆ ದೇಶದ  ಜನರು- 342. ಇತರೆ ರಾಜ್ಯದ ಜನರು-5533.       ಒಟ್ಟು ಸಂಪರ್ಕಗಳು- 765
ಪ್ರಯೋಗಾಲಯ ಪರೀಕ್ಷಾ ವರದಿ ವಿವರ:
ಇಲ್ಲಿಯವರೆಗೆ ಒಟ್ಟು  10314  ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. 
• ಪಾಸಿಟಿವ್ ಪ್ರಕರಣಗಳು- 95  (16 ಪ್ರಕರಣ ಆಸ್ಪತ್ರೆಯಿಂದ ಬಿಡುಗಡೆಗೊಂಡಿದೆ)• ನೆಗೆಟಿವ್ ವರದಿ ಬಂದ ಪ್ರಕರಣಗಳು-8914• ವರದಿ ನಿರೀಕ್ಷಿತ ಪ್ರಕರಣಗಳು-1305. ಮೃತಪಟ್ಟ ಪ್ರಕರಣಗಳು-01
ದಾಖಲಿರುವ ಪ್ರಕರಣಗಳು:
 ಕೋವಿಡ್ ಆಸ್ಪತ್ರೆ : 38 ಕೋವಿಡ್ ಕೇರ್ ಸೆಂಟರ್ : 24 ಹೋಂ ಐಸೋಲೇಶನ್ : 16
ಇತರೆ ವಿಷಯಗಳು: 
ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 03 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ವಿವರ ಕೆಳಕಂಡಂತಿದೆ. 
1. ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದ 36 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರು ಮಹರಾಷ್ಟ್ರದಿಂದ ಬಂದಿದ್ದು, ಇವರನ್ನು ನೇರವಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

2. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯ 77 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರಲ್ಲಿ ಹೆಚ್ಚಿನ ಅನಾರೋಗ್ಯ ಕಂಡುಬಂದ ಕಾರಣ ಇವರನ್ನು ಚಿಕಿತ್ಸೆಗಾಗಿ ಮೈಸೂರಿಗೆ  ಕಳುಹಿಸಲಾಗಿದೆ. 
3. ವಿರಾಜಪೇಟೆ ತಾಲ್ಲೂಕು ಅರ್ಜಿ ಗ್ರಾಮದಲ್ಲಿ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ 08 ವರ್ಷದ ಮಗಳಿಗೆ ಸೋಂಕು ದೃಢಪಟ್ಟಿದೆ. 
ಜಿಲ್ಲೆಯಲ್ಲಿ ಹೊಸದಾಗಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ. 

4. ಮೂರ್ನಾಡಿನ ವ್ಯಕ್ತಿಯೊಬ್ಬರಲ್ಲಿ ಸೋಂಕು ದೃಢ

ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ:96

ಆಸ್ಪತ್ರೆಯಿಂದ ಬಿಡುಗಡೆಗೊಂಡ ಪ್ರಕರಣಗಳ ಸಂಖ್ಯೆ:  16

ಮೃತರ ಸಂಖ್ಯೆ: 1

ಚಿಕಿತ್ಸೆ ಪಡೆಯುತ್ತಿರುವ ಪ್ರಕರಣಗಳ ಸಂಖ್ಯೆ:  79

ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ:37