ಅಂಜೂರ ಹಣ್ಣಿನ ಔಷಧೀಯ ಗುಣಗಳು

July 9, 2020

ಅಂಜೂರ ಮೊರೇಸೀ ಕುಟುಂಬಕ್ಕೆ ಸೇರಿದ ಮರ. ಇದರ ಹಣ್ಣುಗಳನ್ನು ತಿನ್ನಲು ಉಪಯೋಗಿಸುತ್ತಾರೆ. ಫೈಕಸ್ ಕ್ಯಾರಿಕ ಎಂಬುದು ಇದರ ವೈಜ್ಞಾನಿಕ ನಾಮ. ಇದರ ಹಣ್ಣಿನಲ್ಲಿ ಕಬ್ಬಿಣ,ತಾಮ್ರ ಮತ್ತು ಎ,ಬಿ,ಸಿ,ಡಿ ವಿಟಮಿನ್‍ಗಳು ಹೇರಳವಾಗಿವೆ. ಇದೊಂದು ಪೌಷ್ಟಿಕವಾದ ಹಣ್ಣು. ಇದರಲ್ಲಿ ಎ, ಬಿ, ಸಿ ಮತ್ತು ಡಿ ಅನ್ನಾಂಗಗಳು ಇವೆ. ಮಾಂಸವನ್ನು ಬೇಗ ಕುದಿಸಲಿಕ್ಕೆ ಇದರ ಕಾಯಿಯನ್ನು ಸೇರಿಸುವರು.ಹಣ್ಣುಗಳಲ್ಲಿ ಅನೇಕ ಪೌಷ್ಠಿಕಾಂಶಗಳಿವೆ. ಸುಮಾರು 84 ರಷ್ಟು ತಿರುಳಿರುತ್ತದೆ. ಹಣ್ಣುಗಳಲ್ಲಿ ಖನಿಜಾಂಶ ಮತ್ತು ಸಕ್ಕರೆಗಳಿರುವುದರಿಂದ ಪುಷ್ಟಿಕರವಾದ ಆಹಾರವೆನಿಸಿದ್ದು ಬೇಡಿಕೆ ಹೆಚ್ಚು. ಕಬ್ಬಿಣದ ಮತ್ತು ತಾಮ್ರದ ಅಂಶ ಇತರ ಹಣ್ಣುಗಳಲ್ಲಿರುವುದಕ್ಕಿಂತಲೂ ಇವುಗಳಲ್ಲಿ ಹೆಚ್ಚಾಗಿವೆ. ಸತುವಿನ ಅಂಶವೂ ಸ್ವಲ್ಪ ಇರುತ್ತದೆ. ಎ ಮತ್ತು ಸಿ ಅನ್ನಾಂಗಗಳು ಹೆಚ್ಚು ಪ್ರಮಾಣದಲ್ಲೂ ಬಿ ಮತ್ತು ಡಿ ಅನ್ನಾಂಗಗಳು ಕಡಿಮೆ ಪ್ರಮಾಣದಲ್ಲೂ ಇರುತ್ತವೆ. ಇವುಗಳಲ್ಲದೆ ಸಿಟ್ರಿಕ್ ಮತ್ತು ಅಸಿಟಿಕ್ ಆಮ್ಲಗಳೂ ಇರುತ್ತವೆ.

ಲಕ್ಷಣಗಳು

ಅಂಜೂರ ಗಾತ್ರದ ಚಿಕ್ಕ ಮರ. ಇದರ ಎತ್ತರ ಸು. 3-5 ಮೀ. ಕೆಲವು ಸಲ ಇನ್ನೂ ಹೆಚ್ಚು ಎತ್ತರಕ್ಕೆ ಬೆಳೆಯುತ್ತವೆ. ಎಲೆಯ ಮೇಲ್ಭಾಗ ಒರಟು; ತಳಭಾಗದಲ್ಲಿ ರೋಮಗಳಿವೆ. ಹಣ್ಣುಗಳು ಎಲೆಯ ಕಂಕುಳಲ್ಲಿ ಮೂಡುತ್ತವೆ. ಪೇರಳೆಹಣ್ಣಿನಾಕಾರ. ಅವುಗಳ ಬಣ್ಣ ಮತ್ತು ಗಾತ್ರದಲ್ಲಿ ವ್ಯತ್ಯಾಸ ಉಂಟು.ಅಂಜೂರದ ಹೂಗೊಂಚಲು ಅತ್ತಿಯ ಹೂಗೊಂಚಲಿನಂತೆಯೇ ಇದೆ. ಮಂದವಾದ ಅದರ ರಸದಿಂದ ಕೂಡಿದ ಕೋಶದೊಳಗಡೆ ಪುಟ್ಟ ಹೂಗಳಿರುತ್ತವೆ. ಪರಾಗಸ್ಪರ್ಶಕ್ರಿಯೆ ಗೊಂಚಲಿನಲ್ಲಿರುವ ಹೂಗಳ ಸ್ವರೂಪವನ್ನವಲಂಬಿಸಿದೆ. 15′-30′ ಎತ್ತರ ಬೆಳೆಯುವ ಗಿಡ. ಮೂಲತಃ ಭಾರತದ ಸಸ್ಯವಲ್ಲದಿದ್ದರೂ ಈಗ ಇಲ್ಲಿ ಎಷ್ಟೋ ಕಡೆ ಇದನ್ನು ಹಣ್ಣಿಗಾಗಿ ಬೆಳೆಸುತ್ತಾರೆ. ಉಷ್ಣವಾದ ಹವೆ, ಕಪ್ಪುಭೂಮಿ ಮತ್ತು ನೀರಿನ ಸೌಕರ್ಯವಿದ್ದಲ್ಲಿ ಚೆನ್ನಾಗಿ ಬೆಳೆಯುತ್ತದೆ.

ಔಷಧೀಯ ಗುಣಗಳು :

ಇದೊಂದು ಔಷಧೀಯ ವಸ್ತುವೂ ಹೌದು ಅಂಜೂರದ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಹಣ್ಣು ಮೂತ್ರಸ್ರಾವಕ್ಕೆ ಉತ್ತೇಜನಕಾರಿ. ಹೆಚ್ಚುಕಾಲ ಬಳಸಿದರೆ ಆಹಾರದ ಕೊರತೆಯಿಂದ ರಕ್ತಹೀನತೆಯುಂಟಾಗುವುದನ್ನು ತಪ್ಪಿಸುತ್ತದೆ. ಫಸಲು ಬಂದಮೇಲೆ ಎಲೆಗಳನ್ನು ಕಿತ್ತು ದನಗಳಿಗೆ ಹಾಕುವುದುಂಟು. ಗಿಣ್ಣು ಉತ್ಪನ್ನದಲ್ಲಿ ಅಂಜೂರದ ಹಾಲನ್ನು ಹೆಪ್ಪುಗಟ್ಟಿಸುವುದಕ್ಕೆ ಉಪಯೋಗಿಸುತ್ತಾರೆ. ಹಾಲು ಕರುಳಿನಲ್ಲಿರುವ ಜಂತುಹುಳುಗಳನ್ನು ನಾಶಮಾಡುತ್ತದೆ. ಹಣ್ಣನ್ನು ಪೋಲ್ಟೀಸುಮಾಡಿ ಕೀವು ಬರುವ ಗಾಯಕ್ಕೆ ಕಟ್ಟುತ್ತಾರೆ. ಚರ್ಮದಮೇಲೆ ಹಾಲು ಬಿದ್ದರೆ ಗಂದೆ ಮತ್ತು ಗುಳ್ಳೆಗಳಾಗುತ್ತದೆ. ಆಲ್ಕೋಹಾಲ್ ನೀರಿನಲ್ಲಿ ಇವು ಕರಗುತ್ತವೆ.