ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

09/07/2020

ಮಡಿಕೇರಿ ಜು. 9: ಕಳೆದ ವರ್ಷ ಮಳೆ ಹಾನಿಯಿಂದ ಉಂಟಾಗಿದ್ದ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರು ಬೇಗೂರು ಕೊಡ್ಲಿ, ಹೈಸೊಡ್ಲೂರು, ಬಿರುನಾಣಿ ಸೇತುವೆ, ಕೆ.ಕೆ.ಆರ್.ಸೇತುವೆ, ಶ್ರೀಮಂಗಲ ಹೋಬಳಿ ವ್ಯಾಪ್ತಿಗೆ ಗುರುವಾರ ಭೇಟಿ ನೀಡಿ ವೀಕ್ಷಿಸಿದರು. ಎನ್‍ಡಿಆರ್‍ಎಫ್ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳು ಇದ್ದರು.