ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ

10/07/2020

ಮಡಿಕೇರಿ ಜು.10 : ಕೊರೊನಾ ಪಾಸಿಟಿವ್ ಸೋಂಕು ಕಾಣಿಸಿಕೊಂಡು ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗರ್ಭಿಣಿ ಮಹಿಳೆಗೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಹಿಳಾ ಮತ್ತು ಮಕ್ಕಳ ಹಾಗೂ ಅರವಳಿಕೆ ವಿಭಾಗದ ತಜ್ಞ ವೈದ್ಯರು ಸಿಸೇರಿಯನ್ ಮೂಲಕ ಯಶಸ್ವಿ ಹೆರಿಗೆ ಮಾಡಿಸಿದ್ದಾರೆ. ತಾಯಿ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಕೋವಿಡ್-19 ಸಂದರ್ಭದಲ್ಲಿಯೂ ಸಹ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ತಜ್ಞ ವೈದ್ಯರು ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.
ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯರು ತಾಯಿ ಮತ್ತು ಮಗುವಿನ ಆರೈಕೆಗೆ ಹೆಚ್ಚಿನ ನಿಗಾ ವಹಿಸಿದ್ದಾರೆ.