ಮೌಲ್ಯಮಾಪನ ಕೇಂದ್ರಗಳ ಸುತ್ತ ನಿಷೇಧಾಜ್ಞೆ

July 10, 2020

ಮಡಿಕೇರಿ ಜು.10 : ಪ್ರಸಕ್ತ 2020 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಜುಲೈ, 13 ರಂದು ನಗರದ ಸಂತ ಮೈಕಲರ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಕೊಠಡಿಗಳಲ್ಲಿ ನಡೆಯಲಿದ್ದು, ಈ ಕಾರ್ಯವನ್ನು ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ನಡೆಸುವ ಸಲುವಾಗಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಮೌಲ್ಯಮಾಪನ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.