ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 131 ಕ್ಕೆ ಏರಿಕೆ

July 10, 2020

ಮಡಿಕೇರಿ ಜು.10 : ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 9 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 131 ಕ್ಕೆ ಏರಿಕೆಯಾಗಿದೆ.

ವಿರಾಜಪೇಟೆ ತಾಲ್ಲೂಕಿನ ತಿತಿಮತಿಯಲ್ಲಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 65 ವರ್ಷದ ಮಹಿಳೆ, 32 ವರ್ಷದ ಪುರುಷ, 45 ವರ್ಷದ ಪುರುಷ , 35 ವರ್ಷದ ಮಹಿಳೆ, 20 ವರ್ಷದ ಪುರುಷ, 19 ವರ್ಷದ ಹುಡುಗ ಮತ್ತು 45 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ವಿರಾಜಪೇಟೆ ತಾಲ್ಲೂಕಿನ ಅಪ್ಪಯ್ಯ ಸ್ವಾಮಿ ರಸ್ತೆಯ ನಿವಾಸಿ ಜ್ವರ ಲಕ್ಷಣಗಳಿದ್ದ 55 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದ್ದು, ಇವರು ಪ್ರಸ್ತುತ ವಿರಾಜಪೇಟೆಯ ಗೋಣಿಕೊಪ್ಪದಲ್ಲಿ ವಾಸವಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದ ಜ್ವರ ಲಕ್ಷಣಗಳಿದ್ದ 34 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಹೊಸದಾಗಿ 3 ನಿಯಂತ್ರಿತ ಪ್ರದೇಶಗಳನ್ನು ತೆರೆಯಲಾಗಿದ್ದು, ವಿರಾಜಪೇಟೆಯ ಅಪ್ಪಯ್ಯ ಸ್ವಾಮಿ ರಸ್ತೆ, ಗೋಣಿಕೊಪ್ಪ, ಕುಟ್ಟ.

ಸರ್ಕಾರದ ನಿಯಮಾನುಸಾರ ಅವಧಿ ಮುಗಿದ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ, ಮಡಿಕೇರಿ ತಾಲ್ಲೂಕಿನ ತಾಳತ್ತಮನೆ, ಕಗ್ಗೋಡ್ಲು, ಮಡಿಕೇರಿಯ ಕೋಟೆ ಮಾರಿಯಮ್ಮ ದೇವಸ್ಥಾನ ರಸ್ತೆ, ಸೋಮವಾರಪೇಟೆ ತಾಲ್ಲೂಕಿನ ಮುಳ್ಳೂರು, . ಬಳಗುಂದ ಮಡಿಕೇರಿಯ ಪುಟಾಣಿ ನಗರ, ಕುಶಾಲನಗರದ ರಥಬೀದಿ ಒಟ್ಟು 8 ನಿಯಂತ್ರಿತ ಪ್ರದೇಶಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.

ಒಟ್ಟು 131 ಮಂದಿ ಸೋಂಕಿತರಲ್ಲಿ 18 ಮಂದಿ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. 112 ಮಂದಿಗೆ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯ 53 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.