ಮೇಲ್ವಿಚಾರಣೆಗೆ ಐಎಎಸ್ ಅಧಿಕಾರಿಗಳ ನೇಮಕ

10/07/2020

ಬೆಂಗಳೂರು ಜು.10 : ನಗರದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಬೆಂಗಳೂರನ್ನು 8 ವಲಯಗಳಾಗಿ ವಿಭಾಗಿಸಿ ಪ್ರತೀ ವಲಯಗಳಿಗೆ ಓರ್ವ ಸಚಿವರು ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗೆ ಜವಾಬ್ದಾರಿ ನೀಡಲಾಗಿದೆ. ಅಲ್ಲದೆ 8 ವಲಯಗಳಿಗೂ 8 ಹಿರಿಯ ಐಎಎಸ್ ಅಧಿಕಾರಿಗಳನ್ನು ಮೇಲ್ವಿಚಾರಣೆಗಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಈ ಸಂಬಂದ ಅಧಿಕೃತ ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿರ್ವಹಣಾ ಕ್ರಮಗಳ ಮೇಲ್ವಿಚಾರಣೆ ಮತ್ತು ಪರಿಶೀಲಿಸಲು ಹಾಗೂ ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳಲು ಕಾರ್ಯೋನ್ಮುಖರಾಗಲು ಅನುವಾಗುವಂತೆ ಈ ಕೆಳಕಂಡ ವಲಯ ಸಂಯೋಜಕರನ್ನು ಜುಲೈ 9, 2020ರಿಂದ ಅನ್ವಯವಾಗುವಂತೆ ರಚಿಸಿ, ನೇಮಿಸಲಾಗಿದೆ.