ಮೂರ್ನಾಡಿನಲ್ಲಿ ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್‍ಡೌನ್‍ಗೆ ನಿರ್ಧಾರ

10/07/2020

ಮಡಿಕೇರಿ ಜು. 10 : ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೂರ್ನಾಡಿನ ಎಲ್ಲಾ ಸಂಘ-ಸಂಸ್ಥೆಗಳು ಮತ್ತು ಚೇಂಬರ್ ಆಫ್ ಕಾಮರ್ಸ್ ಮತ್ತು ಗ್ರಾಮ ಪಂಚಾಯಿತಿ ಶನಿವಾರ ಮತ್ತು ಭಾನುವಾರ ಸಂಪೂರ್ಣ ವ್ಯಾಪಾರ ವಹಿವಾಟುಗಳುಗಳನ್ನು ಸ್ವಯಂಪ್ರೇರಿತರಾಗಿ ಬಂದ್ ಮಾಡಲು ನಿರ್ಧರಿಸಿದೆ.