ಮಡಿಕೇರಿಯಲ್ಲಿ ಶನಿವಾರ ಮತ್ತು ಭಾನುವಾರ ಬಂದ್‌ಗೆ ಚೇಂಬರ್ ಆಫ್ ಕಾಮರ್ಸ್ ನಿರ್ಧಾರ
10/07/2020

ಮಡಿಕೇರಿ ಜು. 9 : ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಪಟ್ಟಣದಲ್ಲಿ ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಮುಂಜಾಗೃತ ಕ್ರಮವಾಗಿ ಜು. 12 ಭಾನುವಾರದಿಂದ ಜು. 26ರ ವರೆಗೆ ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್‍ಡೌನ್ ಮಾಡಲು ಜಿಲ್ಲಾ ಹಾಗೂ ಮಡಿಕೇರಿ ಚೇಂಬರ್ ಆಫ್ ಕಾಮರ್ಸ್‍ನಿಂದ ನಿರ್ಧಾರ ಕೈಗೊಳ್ಳಲಾಗಿದೆ.
ವರ್ತಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಪ್ಪಚ್ಚು ಮನವಿ ಮಾಡಿದ್ದಾರೆ.
