ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 131 ಕ್ಕೆ ಏರಿಕೆ : 53 ನಿಯಂತ್ರಿತ ಪ್ರದೇಶಗಳ ಮೇಲೆ ನಿಗಾ

July 10, 2020

ಮಡಿಕೇರಿ ಜು.10 : ಕೊಡಗು ಜಿಲ್ಲೆಯಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 131 ಕ್ಕೆ ಏರಿಕೆಯಾಗಿದೆ.
ವಿರಾಜಪೇಟೆ ತಾಲ್ಲೂಕಿನ ತಿತಿಮತಿಯಲ್ಲಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 65 ವರ್ಷದ ಮಹಿಳೆ, 32 ವರ್ಷದ ಪುರುಷ, 45 ವರ್ಷದ ಪುರುಷ , 35 ವರ್ಷದ ಮಹಿಳೆ, 20 ವರ್ಷದ ಪುರುಷ, 19 ವರ್ಷದ ಹುಡುಗ ಮತ್ತು 45 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ವಿರಾಜಪೇಟೆ ತಾಲ್ಲೂಕಿನ ಅಪ್ಪಯ್ಯ ಸ್ವಾಮಿ ರಸ್ತೆಯ ನಿವಾಸಿ ಜ್ವರ ಲಕ್ಷಣಗಳಿದ್ದ 55 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರು ಪ್ರಸ್ತುತ ವಿರಾಜಪೇಟೆಯ ಗೋಣಿಕೊಪ್ಪದಲ್ಲಿ ವಾಸವಿದ್ದಾರೆ.
ವಿರಾಜಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದ ಜ್ವರ ಲಕ್ಷಣಗಳಿದ್ದ 34 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಒಟ್ಟು ಸೋಂಕಿತರ ಸಂಖ್ಯೆ 131 ಆಗಿದ್ದು, 18 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದು, ಉಳಿದ 112 ಮಂದಿಗೆ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಒಟ್ಟು 53 ನಿಯಂತ್ರಿತ ಪ್ರದೇಶಗಳ ಮೇಲೆ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.