ಶಾಲಾ ಕಚೇರಿಗಳಿಗೆ ಶನಿವಾರ ರಜೆ

11/07/2020

ಬೆಂಗಳೂರು ಜು.11 : ಶಿಕ್ಷಣ ಇಲಾಖೆಯ ಎಲ್ಲಾ ಶಾಲಾ ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆನಿರ್ದೇಶಕರು ಆದೇಶಿಸಿದ್ದಾರೆ.
ಕೋವಿಡ್ -19 ಸೋಂಕು ಹರಡುವಿಕೆಯನ್ನು ನಿಯಂತ್ರಣ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆಗಳಿಗೆ ಕಚೇರಿಗಳಿಗೆ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ ಎಲ್ಲಾ ಶನಿವಾರಗಳಂದು ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ ಹೊರಡಿಸಲಾಗಿರುವ ಆದೇಶ ಅನ್ವಯವಾಗುತ್ತದೆ. ಈ ರಜೆಯು ಕೋವಿಡ್-19 ಕಾರ್ಯಕ್ಕೆ ನಿಯುಕ್ತರಾಗಿರುವ ಶಿಕ್ಷಕರು, ಅಧಿಕಾರಿ ಸಿಬ್ಬಂದಿಯವರಿಗೆ ಹಾಗೂ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಶಿಕ್ಷಕರು ಅಧಿಕಾರಿ ಸಿಬ್ಬಂದಿಯವರಿಗೆ, ಅನ್ವಯವಾಗುವುದಿಲ್ಲವೆಂದು ಸ್ಪಷ್ಟಪಡಿಸಿದೆ.