ಎಲ್ಲಾ ಪದವಿ ಪರೀಕ್ಷೆಗಳು ರದ್ದು

11/07/2020

ಬೆಂಗಳೂರು ಜು.11 : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.
ಮಾರಕ ಕೋವಿಡ್- 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿ ಯಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಕೊಂಡಿದೆ. 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ,ಸ್ನಾತಕೋತ್ತರ,ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಪ್ರಕಟಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‍ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಲಾಗಿದೆ ಎಂದರು.