ಮೇಲ್ಮನೆ ಸದಸ್ಯರಿಗೆ ಬೀಳ್ಕೊಡುಗೆ

11/07/2020

ಬೆಂಗಳೂರು ಜು.11 : ಮೇಲ್ಮನೆಯಲ್ಲಿ ತಮ್ಮ ಅವಧಿಯನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿದ 16 ಮಂದಿ ಸದಸ್ಯರನ್ನು ಶುಕ್ರವಾರ ಬೀಳ್ಕೊಡಲಾಯಿತು.
ಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ವಿಧಾನ ಪರಿಷತ್ ಸಚಿವಾಲಯ ಹಮ್ಮಿಕೊಂಡಿದ್ದ ಬಿಳ್ಕೊಡುಗೆ ಸಮಾರಂಭದಲ್ಲಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಮತ್ತಿತರ ಗಣ್ಯರು ನಿವೃತ್ತ ವಿಧಾನ ಪರಿಷತ್ ಸದಸ್ಯರನ್ನು ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ವಿಪಕ್ಷ ಮುಖ್ಯ ಸಚೇತಕ ನಾರಾಯಣಸ್ವಾಮಿ, ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಸೇರಿ ಹಲವರು ಭಾಗಿಯಾಗಿದ್ದರು.
ಎಂಟು ಮಂದಿ ಸದಸ್ಯರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಉಳಿದ ಸದಸ್ಯರು ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ.