ದೇಶದಲ್ಲಿ ಲಾಕ್‍ಡೌನ್ ಯಶಸ್ವಿಯಾಗಿದೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

July 11, 2020

ಮಡಿಕೇರಿ ಜು. 11 : ದೇಶದಲ್ಲಿ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಾರಿಗೆ ತಂದ ಲಾಕ್‍ಡೌನ್ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೊರೋನಾ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಲಾಕ್‍ಡೌನ್ ಯಶಸ್ವಿಯಾಗಿದ್ದು, ಜನರ ಆರ್ಥಿಕ ಸುಧಾರಣೆಗಾಗಿ ಪ್ರಧಾನಿ 20 ಲಕ್ಷ ಕೋಟಿ ಬಿಡುಗಡೆ ಮಾಡಿದ್ದಾರೆ.
ಪಕ್ಷದ ಕಾರ್ಯಕರ್ತರು 50 ಲಕ್ಷ ಜನರಿಗೆ ಆಹಾರ ಪೂರೈಸುವ ಕೆಲಸ ಮಾಡಿದ್ದಾರೆ. ಜಿಲ್ಲಾ ಮಟ್ಟದ ಸಮಸ್ಯೆಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದ್ದು, ಆ ನಿಟ್ಟಿನಲ್ಲಿ ತಾನು ಜಿಲ್ಲಾ ಪ್ರವಾಸ ಮಾಡುತ್ತಿದ್ದೇನೆ ಎಂದು ಮಾಹಿತಿ ನೀಡಿದರು.

error: Content is protected !!