ಸಾಗುವಳಿ ಸಕ್ರಮೀಕರಣ ಸಮಿತಿ ಅಧ್ಯಕ್ಷ ಕೆ.ಬಿ.ಗಿರೀಶ್ ಗೆ ಸನ್ಮಾನ

July 11, 2020

ಮಡಿಕೇರಿ ಜು.11 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಮಾಜಿ ಅಧ್ಯಕ್ಷ ಕೆ.ಬಿ.ಗಿರೀಶ್ ಗಣಪತಿ ಅವರನ್ನು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಗಿರೀಶ್ ಅವರು ರಾಜ್ಯ ಎಸ್.ಕೆ.ಸಿ.ಸಿ.ಐ ನ ನಿರ್ದೇಶಕರೂ ಹಾಗೂ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಟ್ರಸ್ಟ್‍ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.