ತೆಪ್ಪದಕಂಡಿ ಕಾವೇರಿ ನದಿ ತೂಗುಸೇತುವೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ತಡೆ

12/07/2020

ಕುಶಾಲನಗರ ಜು.12 : ಗುಡ್ಡೆಹೊಸೂರು ತೆಪ್ಪದಕಂಡಿ ಕಾವೇರಿ ನದಿ ತೂಗುಸೇತುವೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಪೊಲೀಸರು ತಡೆ ಒಡ್ಡಿದ್ದಾರೆ.
ಸೇತುವೆಯಲ್ಲಿ ನಾಗರೀಕರಿಗೆ ಓಡಾಡಲು ಮಾತ್ರ ಅವಕಾಶವಿದ್ದು ವಾಹನ ಸಂಚಾರ ಮಾಡದಂತೆ ಸೇತುವೆಯ ಮುಖ್ಯದ್ವಾರದಲ್ಲಿ ತಡೆ ನಿರ್ಮಿಸಿ ಕ್ರಮಕೈಗೊಂಡಿದ್ದಾರೆ.
ಮೈಸೂರು-ಕೊಡಗು ಜಿಲ್ಲೆಗಳ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ಮೂಲಕ ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಗಾಂಜಾ ಮತ್ತಿತರ ವಸ್ತುಗಳನ್ನು ಯಥೇಚ್ಚವಾಗಿ ಸಾಗಾಟ ಮಾಡುತ್ತಿರುವ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ತಿಳಿಸಿದ್ದಾರೆ.